ಇಂದಿನಿಂದ ನಿಗದಿಯಂತೆ ನಡೆಯಲಿದೆ KPSC ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ :
ಅಭ್ಯರ್ಥಿಗಳು ತಪ್ಪದೇ ಈ ಮಾರ್ಗಸೂಚಿ ಅನುಸರಿಸಸಬೇಕು
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ಇಂದಿನಿಂದ ನಿಗದಿಯಂತೆ ನಡೆಯಲಿದೆ. ಒಟ್ಟು 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಈ ಪರೀಕ್ಷೆ ನಡೆಯಲಿದ್ದು, 1,65,258 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು ಪರೀಕ್ಷೆ ಬರೆಯಲು ಸಿದ್ದರಾಗಿದ್ದಾರೆ.
ಕೊರೋನಾ ಸೊಂಕಿನ ಹಿನ್ನಲೆಯಲ್ಲಿ ಇಲಾಖೆಯಯ ಮುಂಜಾಗ್ರತವಾಗಿ ಎಲ್ಲಾ ಕ್ರಮವನ್ನು ಹಾಗೂ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಂಡಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಆವರಣವನ್ನು ಆರಿಸಿ ಕಲಂ 144ರ ಮೇರೆಗೆ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ.
ಸದರಿ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ಬೆಳಗ್ಗೆ 09 ರಿಂದ ಸಂಜೆ 5ರ ವರೆಗೆ ಜೆರಾಕ್ಸ್ ಸೆಂಟರ್ ಹಾಗೂ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಕರೋನಾ ಸೋಂಕು ಹಿನ್ನಲೆಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ, ಪಿಯುಸಿಯ ಒಂದು ವಿಷಯದ ಪರೀಕ್ಷೆ ಹಾಗೂ ಸಿಇಟಿ ಪರೀಕ್ಷೆಗಳನ್ನು ಅತ್ಯಂತ ಯಶಸ್ವಿಯಾಗಿ ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದಂತೆ ಸಂಪೂರ್ಣ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ನಿರ್ವಹಿಸಲಾಗಿದೆ, ಅದೇ ಮಾದರಿಯಲ್ಲಿ ಈ ಪರೀಕ್ಷೆಗಳನ್ನು ಆಯಾ ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಿರುವ ಜಿಲ್ಲಾ ಮುಖ್ಯಸ್ಥರು ಹಾಗೂ ಜಿಲ್ಲಾ ಡಳಿತದಿಂದ ಕ್ರಮಕೈಗೊಳ್ಳಲಾಗಿದೆ, ಪರೀಕ್ಷಾ ಕೊಠಡಿಯಲ್ಲಿ ಸ್ಯಾನಿಟೈಜೇಷನ್ ಮಾಡಲಾಗುವುದು, ಅಭ್ಯರ್ಥಿಗಳು ಒಂದೂವರೆ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು, ಅವರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುವುದು, ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಅವರಿಗೆ ಹ್ಯಾಂಡ್ ಸ್ಯಾನಿಟೈಜರ್ ಹಾಗೂ ಕುಡಿಯುವ ನೀರನ್ನು ಪೂರೈಸಲಾಗುವುದು,
ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸೇಷನ್ ಮಾಡಬೇಕು ಹಾಗೂ ಥರ್ಮಲ್ ಸ್ಕ್ಯಾನರ್, ಕೈ ಗವಸು ಮತ್ತು ಮಾಸ್ಕ್ ಗಳನ್ನು ಕಡ್ಡಾಯವಾಗಿ ಬಳಸಿ ಪರೀಕ್ಷೆ ನಡೆಸಬೇಕು ಎಂದರಲ್ಲದೆ, ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಪರೀಕ್ಷಾರ್ಥಿಗಳು ಬೆಳಗ್ಗೆ 8 ಗಂಟೆಗೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುವಂತೆ ಪ್ರವೇಶ ಪತ್ರದಲ್ಲಿ ಸೂಚನೆ ನೀಡಲಾಗಿದೆ ಹಾಗಾಗಿ ಮುಂಚೆಯೇ ತಪಾಸಣೆ ಮಾಡಿ ನಂತರ ಪರೀಕ್ಷಾ ಕೊಠಡಿಗೆ ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇನ್ವಿಸಿಲೇಟರ್‍ಗಳು ಕಟ್ಟುನಿಟ್ಟಿನಿಂದ ಪರೀಕ್ಷೆ ನಡೆಸಬೇಕು ಹಾಗೂ ಪ್ರಶ್ನೆಪತ್ರಿಕೆಗಳು ಮತ್ತು ಒ.ಎಂ.ಆರ್. ಹಾಳೆಗಳನ್ನು ಸರಿಯಾಗಿ ಹಂಚಿಕೆ ಮಾಡಬೇಕು. ಜೊತೆಗೆ ಅಭ್ಯರ್ಥಿಗಳಿಗೆ ನೀಡಬೇಕಾದ ಒ.ಎಂ.ಆರ್. ಹಾಳೆಗಳನ್ನು ಖಚಿತ ಪಡಿಸಿಕೊಂಡು ನಂತರ ನೀಡಬೇಕು ಹಾಗೂ ಅಭ್ಯರ್ಥಿಗಳಿಗೆ ಮೀಸಲಿರಿಸಿರುವ ಕೊಠಡಿಯಲ್ಲಿಯೇ ಪರೀಕ್ಷೆ ನೀಡುವಂತೆ ಕ್ರಮವಹಿಸಲು ಸೂಚನೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಎರಡು ಕೊಠಡಿಗಳನ್ನು ಕಡ್ಡಾಯವಾಗಿ ಮೀಸಲಿರಿಸಿ, ಒಂದರಲ್ಲಿ ಕಂಟೈನ್ಮೆಂಟ್ ವಲಯದಿಂದ ಬಂದವರು, ಪ್ರಾಥಮಿಕ ಸಂಪರ್ಕಿತರು, ದ್ವಿತೀಯ ಹಂತದ ಸಂಪರ್ಕಿತರು ಹಾಗೂ ರೋಗಲಕ್ಷಣಗಳಿರುವವರನ್ನು ಮತ್ತು ಮತ್ತೊಂದು ಕೊಠಡಿಯಲ್ಲಿ ಸಾಮಾನ್ಯ ಅಭ್ಯರ್ಥಿಗಳನ್ನಿರಿಸಿ ಪರೀಕ್ಷೆ ನಡೆಸಲಾಗುವುದು.
ಒಂದು ತಿಂಗಳ ಹಿಂದೆಯೇ ಸೋಂಕಿನಿಂದ ಗುಣಮುಖರಾಗಿರುವ ಅಭ್ಯರ್ಥಿಗಳಿದ್ದರೆ ಅಂತಹವರನ್ನು ಕೋವಿಡ್ ಕೇರ್ ಪರೀಕ್ಷಾ ಕೇಂದ್ರಕ್ಕೆ ಕಳುಹಿಸದೆ, ಸಾಮಾನ್ಯ ಕೊಠಡಿಯಲ್ಲಿಯೇ ಪರೀಕ್ಷೆ ನೀಡುವಂತೆ ಅಧಿಕಾರಿಗಳಿಗೆ ಕೆ.ಪಿ.ಎಸ್.ಸಿ. ಇಲಾಖಾ ಕಾರ್ಯದರ್ಶಿಯವರು ತಿಳಿಸಲಾಗಿದೆ. ಕೋವಿಡ್ ಕೇರ್ ಪರೀಕ್ಷಾ ಕೇಂದ್ರದ ಅಭ್ಯರ್ಥಿಗಳ ಒ.ಎಂ.ಆರ್. ಹಾಳೆಗಳನ್ನು ಎರೆಡು ಅಥವಾ ಮೂರು ಲೇಯರ್‍ನಲ್ಲಿ ಪ್ಯಾಕ್ ಮಾಡಿ, ಸ್ಯಾನಿಟೈಸೇಷನ್ ಮಾಡಿ ಹಾಗೂ ಸೀಲ್ ಮಾಡಿ ನಂತರ ಪೋಸ್ಟ್ ಆಫೀಸ್‍ಗೆ ಕಳುಹಿಸುವಂತೆ ಅವರು ಅಯಾ ಜಿಲ್ಲಾಧಿಕಾರಿಗಳಿಗೆ ಕೆ.ಪಿ.ಎಸ್.ಸಿ. ಇಲಾಖಾ ಕಾರ್ಯದರ್ಶಿ ಸತ್ಯವತಿ ಅವರು ನಿರ್ದೇಶಿಸಿದ್ದಾರೆ. ಪ್ರತಿ ಅಭ್ಯರ್ಥಿಗೂ ಎರಡು ಮೀಟರ್ ಅಂತರದಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಕೆಮ್ಮು, ಉಸಿರಾಟದ ತೊಂದರೆ, ನೆಗಡಿಯಂತಹ ಲಕ್ಷಣ ಕಂಡು ಬರುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ