ಬೆಳೆ ನಷ್ಟಕ್ಕೆ ಸಿಲುಕಿದ ರೈತರಿಗೆ ಸರ್ಕಾರ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು: ಬಂಡೆಪ್ಪ ಖಾಶೆಂಪುರ್

ಬೆಳೆ ನಷ್ಟಕ್ಕೆ ಸಿಲುಕಿದ ರೈತರಿಗೆ ಸರ್ಕಾರ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು: ಬಂಡೆಪ್ಪ ಖಾಶೆಂಪುರ್

ಬೀದರ್ (ಸೆ.14): ನಿರಂತರ ಮಳೆಯಿಂದಾಗಿ ಬೀದರ್ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಹೆಸರು, ಉದ್ದು ಸೇರಿದಂತೆ ಅನೇಕ ಬೆಳೆಗಳು ಹಾಳಾಗಿ ಹೋಗಿವೆ. ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ.ಗಳಂತೆ ಬೆಳೆ ನಷ್ಟ ಸಂಭವಿಸಿದ ರೈತರಿಗೆ ಪರಿಹಾರ ನೀಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಕೃಷಿ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕಿನ ಮರ್ಜಾಪೂರ (ಎಂ) ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕೊರೊನಾ ಮಹಾಮಾರಿ ಮಧ್ಯದಲ್ಲೇ ರೈತರು ಮುಂಗಾರು ಬಿತ್ತನೆ ಮಾಡಿದ್ದರು. ಒಂದು ಹಂತದಲ್ಲಿ ಉತ್ತಮ ಬೆಳೆ ಬಂದಿತ್ತಾದರು ರಾಶಿ ಸಮಯದಲ್ಲೇ ಮಳೆ ಸಂಭವಿಸಿದ್ದು ಬೆಳೆಗಳು ಹಾಳಾಗಿ ಹೋಗಿವೆ. ಬಿತ್ತನೆ ಮಾಡಿದ್ದ ಹೆಸರು, ಉದ್ದು ಸೇರಿದಂತೆ ಅನೇಕ ಬೆಳೆಗಳು ನೆಲಸಮವಾಗಿವೆ.
ಜಿಲ್ಲೆಯಲ್ಲಿ 28345 ಎಕ್ಟರ್ ಹೆಸರು, 25000 ಎಕ್ಟರ್ ಉದ್ದು ಬಿತ್ತನೆ ಮಾಡಲಾಗಿದ್ದು, ಬಹುತೇಕ ರೈತರು ಮಳೆಯಿಂದಾಗಿ ಬೆಳೆ ಕಳೆದುಕೊಂಡಿದ್ದಾರೆ. ಬೆಳೆ ಕಳೆದುಕೊಂಡ ರೈತರಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡಬೇಕು. ಕೂಡಲೇ ಸರ್ಕಾರ ರೈತರ ನೆರವಿಗೆ ಮುಂದಾಗಬೇಕು. ಅಧಿವೇಶನದಲ್ಲಿ ಕೂಡ ಈ ವಿಷಯದಲ್ಲಿ ಸರ್ಕಾರವನ್ನು ಒತ್ತಾಯಿಸುತ್ತೇವೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಹೆಚ್, ಉಪ ಕೃಷಿ ನಿರ್ದೇಶಕ ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕ ದುಳಪ್ಪ ಹೆಚ್, ಬಗದಲ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಸಂಗಮೇಶ, ಕಮಠಾಣಾ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಮೀರೂದ್ದೀನ್, ಮಾಣಿಕ್, ರಾಜಕುಮಾರ್ ಸೇರಿದಂತೆ ಅನೇಕ ಅಧಿಕಾರಿಗಳು, ರೈತರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.