ಅರಕಲಗೂಡು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬ್ಲಾಕ್ ಕಾಂಗ್ರೆಸ್ ನ ನೂತನ ಕೆಪಿಸಿಸಿ ಸದಸ್ಯರಾಗಿ ಹೆಚ್.ಟಿ. ಮಂಜುನಾಥ್ ನೇಮಕ

ಅರಕಲಗೂಡು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್‌ ನ ಕೆಪಿಸಿಸಿ ನೂತನ ಸದಸ್ಯರಾಗಿ  ಹೆಂಟಿಗೆರೆ ಕೊಪ್ಪಲು ತಿಮ್ಮೇಗೌಡರ ಮಗ  ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ನೇಮಕ ಮಾಡಿದ್ದಾರೆ. 
ಮಂಜುನಾಥ್ ಅವರು ಹುಟ್ಟು ರಾಜಕೀಯ ಕುಟುಂಬದಿಂದ ಬಂದವರಾಗಿದ್ದು ಇವರ ತಂದೆ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿದ್ದರು. ಮಂಜುನಾಥ್ ಅವರಿಗೆ  ಅರಕಲಗೂಡು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದ್ದು ಮುಂದಿನ ದಿನಗಳಲ್ಲಿ ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಅನ್ನು ಬಲವರ್ಧನೆ ಮಾಡುವ  ಮಾಡುವ ಗುರಿ ಹೊಂದಿದ್ದಾರೆ ಎನ್ನಲಾಗಿದೆ. ಮಂಜುನಾಥ್ ಅವರಿಗೆ ಹಾಸನ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ನ ಮಾರ್ಗದರ್ಶನದಲ್ಲಿ ಅರಕಲಗೂಡು ತಾಲ್ಲೂಕಿನ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಅರಕಲಗೂಡು: ಶುಂಠಿಗೆ 1500/- ಬೆಂಬಲ ಬೆಲೆ ನೀಡುವಂತೆ ಹೆಚ್ ಯೋಗಾರಮೇಶ್ ನೇತೃತ್ವದಲ್ಲಿ ಸರ್ಕಾರಕ್ಕೆ ಮನವಿ.

ರಾಮದುರ್ಗ: ವಿಶ್ವ ರೇಬಿಸ್ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ದಿನ.46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು