ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ. ಅರಕಲಗೂಡು ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ.

ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ.
ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಹಂಪಾಪುರ ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳು  20/03/2021 ರಂದು ವಾಸ್ತವ್ಯ ಹೂಡಲಿದ್ದು ಸಾರ್ವಜನಿಕರು ಅವರ ಕುಂದು ಕೊರತೆಗಳ ಅವಹಾಲನ್ನು ಸಲ್ಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ‌ ಸಂಖ್ಯೆಯಲ್ಲಿ  ಸಾರ್ವಜನಿಕರು ಬಂದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಅರಕಲಗೂಡು ತಹಶಿಲ್ದಾರರಾದ ವೈ. ಎಂ.ರೇಣುಕುಮಾರ್ ತಿಳಿಸಲಾಗಿದೆ. 
ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿಯ ಕಡೆ.
ಸರಕಾರದ ಸೂಚನೆಯ ಮೇರೆಗೆ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ತಾಲ್ಲೂಕಿನ ಒಂದು ಹಳ್ಳಿಯಲ್ಲಿ  ವಾಸ್ತವ್ಯ ಮಾಡಬೇಕು. ಅದರಂತೆ ಅರಕಲಗೂಡು ತಾಲ್ಲೂಕಿನ ರಾಮನಾಥಪುರ ಹೋಬಳಿ ಹಂಪಾಪುರ ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳು   20/03/2021 ರಂದು ಗ್ರಾಮ‌ ವಾಸ್ತವ್ಯ ಮಾಡಲಿದ್ದಾರೆ. ಇದಕ್ಕಾಗಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಿತ್ತಿದ್ದಾರೆ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯ ಸಲಕ ಸಿದ್ದತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದ 11 ಗಂಟೆಗಳ ವರೆಗೆ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ  ನಡೆಸಲಿದ್ದು ಸಾರ್ವಜನಿಕರು ಅವರ ಕುಂದು ಕೊರತೆಗಳ ಅವಹಾಲನ್ನು ಸಲ್ಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ‌ ಸಂಖ್ಯೆಯಲ್ಲಿ  ಸಾರ್ವಜನಿಕರು ಬಂದು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕು ಆಡಳಿತದಿಂದ ತಿಳಿಸಲಾಗಿದೆ. ಜಿಲ್ಲಾಧಿಕಾರಿ ಅವರನ್ನು ಹಂಪಾಪುರ ಗ್ರಾಮದ ಗಡಿಯಲ್ಲಿ ಸ್ವಾಗತಿಸಲಾಗುವುದು. ನಂತರ ಹಂಪಾಪುರ ಗ್ರಾಮದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಜಾಗದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಮಾಡಲಿದ್ದಾರೆ, ನಂತರ ಜಾನುವಾರುಗಳ ಆರೋಗ್ಯ ತಪಾಸಣೆ ಕೇಂದ್ರ ಉದ್ಘಾಟನೆ, ಅಂಗನವಾಡಿ ಕೆಂದ್ರಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ವೇಧಿಕೆ ಕಾರ್ಯಕ್ರಮ ನಂತರ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಿದ್ದಾರೆ. ನಂತರ ವಿವಿಧ ಇಲಾಖೆಯ ಅಧಿಕಾರಿಗಳಿಂದ ಸಾರ್ವಜನಿಕರಿಗೆ  ಆಯಾ ಇಲಾಖೆಯಲ್ಲಿ ಲಭ್ಯವಿರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ನಂತರ ಸಾರ್ವಜನಿಕರಿಂದ ಸ್ವೀಕಾರವಾದ ಅರ್ಜಿಗಳಿಗೆ ಸಾಧ್ಯವಾದರೆ  ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ನಂತರ ಜೆ.ಹೊಸಹಳ್ಳಿ ಗ್ರಾಮದಲ್ಲಿ ಉಪವಿಭಾಗ ಅಧಿಕಾರಿ,  ತಹಶಿಲ್ದಾರರು, ಜಿಲ್ಲಾಧಿಕಾರಿ ಸೇರಿದಂತೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.  ಸುತ್ತಮುತ್ತಲಿನ ಗ್ರಾಮಸ್ಥರು ಬಂದು ಕಾರ್ಯಕ್ರಮ ಯಶಸ್ವಿಯಾಗಿಸಲು ಸಹಕರಿಸಬೇಂದು ಅರಕಲಗೂಡು ತಹಶಿಲ್ದಾರ್ ರೇಣುಕುಮಾರ್ ಮನವಿ ಮಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.