ಪೋಸ್ಟ್‌ಗಳು

ಮೇ, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಕಲುಷಿತ ನೀರಿನ ಸರಬರಾಜು ಆರೋಪಿಸಿ ಗ್ರಾಮಸ್ಥರ ಆಕ್ರೋಶ.

ಇಮೇಜ್
ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಕಲುಷಿತ ಕುಡಿಯುವ ನೀರಿನ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಕೇಂದ್ರ ಸ್ಥಾನವಾದ ಬಸವಾಪಟ್ಟಣ ಗ್ರಾಮಕ್ಕೆ ಕಾವೇರಿ ನದಿಯಿಂದ ಕಲುಷಿತ ನೀರಿನ ಸರಬರಾಜು  ಕಂಡು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರಿನ ಸರಬರಾಜು ಅವಸ್ಥೆಯನ್ನು ಕಂಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಿಂದ ಸ್ವಲ್ಪ ದೂರದಲ್ಲಿ ಹರಿಯುವ ಕಾವೇರಿ ನದಿಯಿಂದ  ನೀರಿನ ಪೂರೈಕೆ ಮಾಡುವ ಸ್ಥಳವು ಕಲುಷಿತಗೊಂಡಿದ್ದು ಅದೇ ಸ್ಥಳದಿಂದ ನೀರನ್ನು ಪೂರೈಸುತ್ತಿರುವುದು ವಿಷಾದನೀಯ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕನಿಷ್ಟ ಮೂಲಭೂತ ಸೌಲಭ್ಯವನ್ನು ಒದಗಿಸದಿರುವುದು ಗ್ರಾಮ ಪಂಚಾಯಿತಿ ಆಡಳಿತ ವೈಫಲ್ಯಕ್ಕೆ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ ನೀರನ್ನು ಪಂಪ್ ಮಾಡುವ ಸ್ಥಳ ಶಿಥಿಲಗೊಂಡಿದ್ದು ಅಲ್ಲದೆ ಕೊಳಚೆ ಪ್ರದೇಶವಾಗಿದೆ ಇದೇ ಸ್ಥಳದಿಂದ ಗ್ರಾಮಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿದ್ದು  ನಲ್ಲಿಗಳಲ್ಲಿ ಕಲುಷಿತ  ನೀರು ಬರುತ್ತಿರುವುದು ಗೃಹಿಣಿಯರ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಹೊಡೆದು ವರ್ಷದಿಂದ ಗ್ರಾಮದೇವತೆ ದೇವಸ್ಥಾನದ ಹತ್ತಿರ ಇರುವ...

ಜನ ಹಿತ ಲಾಕ್ ಡೌನ್ ಬೇಕು.ಹೆಚ್.ಡಿ.ಕುಮಾರಸ್ವಾಮಿ.

ಇಮೇಜ್
ಬೆಂಗಳೂರು: ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂದು ಮಾಜಿ ಸಿಎಂ ಹೆಚ್.ಡಿ, ಕುಮಾರಸ್ವಾಮಿ ಹೇಳಿದ್ದಾರೆ. ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ. ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದಿದ್ದಾರೆ. ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹ...

ಸೋಮವಾರದಿಂದ ಅನಗತ್ಯವಾಗಿ ರಸ್ತೆಗಿಳಿದರೆ ಕಠಿಣ ಕ್ರಮ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ.

ಇಮೇಜ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮೇ 10ರಿಂದ 24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಸೋಮವಾರದಿಂದ ರಸ್ತೆಗಳಲ್ಲಿ ಅನಗತ್ಯವಾಗಿ ಜನರು ಓಡಾಟ ನಡೆಸಿದರೆ ಅರೆಸ್ಟ್ ಮಾಡುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಸಾರ್ವಜನಿಕರು ಜವಾಬ್ದಾರಿಯಿಂದ ನಿಯಮ ಪಾಲನೆ ಮಾಡಬೇಕು ಹೊರತು ಅನಗತ್ಯವಾಗಿ ರಸ್ತೆಗಳಲ್ಲಿ ಓಡಾಟ ನಡೆಸಬಾರದು. ಅಗತ್ಯ ವಸ್ತುಗಳ ಖರೀದಿಗಾಗಿ ಖರೀದಿಗಾಗಿ ಬೆಳಿಗ್ಗೆ 6ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. 10 ಗಂಟೆಯ ಬಳಿಕ ಯಾರೊಬ್ಬರೂ ಮನೆಯಿಂದ ಹೊರಬರುವಂತಿಲ್ಲ. ಅನಗತ್ಯವಾಗಿ ರಸ್ತೆಗಿಳಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಬೇಕಾಬಿಟ್ಟಿಯಾಗಿ ಓಡಾಡುವ, ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಜ್ ಮಾಡಲಾಗುವುದು ಮಾತ್ರವಲ್ಲ ಕೋವಿಡ್ ನಿಯಮ ಉಲ್ಲಂಘನೆ ಮಾಡುವವರನ್ನು ಬಂಧಿಸಲಾಗುವುದು. ಮೆಡಿಕಲ್‌ ಎಮರ್ಜನ್ಸಿ ಹೊರತಾಗಿ ಯಾವುದೇ ಕೆಲಸಕ್ಕೂ ಹೊರಬರುವಂತಿಲ್ಲ. ನಗರದಾದ್ಯಂತ ಪೊಲೀಸರನ್ನು ನಿಯೋಜಿಸಲಾಗಿದ್ದು, ಸಂಪೂರ್ಣ ತಪಾಸಣೆ ನಡೆಸಲಿದ್ದಾರೆ ಎಂದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಗಂಟೆಗೊಂದು ಆದೇಶ

ಇಮೇಜ್
*ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 10ರ ತನಕ ವ್ಯಾಪಾರಕ್ಕೆ ಅವಕಾಶ. ಉಳಿದಂತೆ ಭಾನುವಾರ,  ಮಂಗಳವಾರ, ಗುರುವಾರ,  ಶನಿವಾರ ಹಾಸನ ಸಂಪೂರ್ಣ ಲಾಕ್ ಡೌನ್.* ಆದೇಶವನ್ನು ಇಂದಿನ‌ ಸಭೆಯಲ್ಲಿ ನೀಡಲಾಗಿತ್ತು.  ಜಿಲ್ಲಾ ಉಸ್ತುವಾರಿ ಸಚಿವರಿಂದ ಆದೇಶ. ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಾಲ್ಕು ದಿನ ಲಾಕ್ ಡೌನ್ ಆದೇಶ ರದ್ದು ಮಾಡಿದ್ದು, ಜಿಲ್ಲೆಯ ಶಾಸಕರ ಮನವಿ ಆಗ್ರಹ ಸಲಹೆಗಳಿಗೆ ಕೊಂಚವು ಕಿಮ್ಮತ್ತು ಸಿಕ್ಕಿಲ್ಲ, ಜೆಡಿಎಸ್ ಪಕ್ಷದ ಎಲ್ಲ ಶಾಸಕರು ಮಂತ್ರಿಗಳ ಸಭೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಿರ್ವಹಣೆ ಮಾಡಲು ಲಾಕ್ ಡೌನ್ ಮಾಡಿ ಎಂದು ಹೇಳಿದ್ದರಿಂದ ಮಾಡಿದ್ದ ನಾಲ್ಕು ದಿನಗಳ ಲಾಕ್ ಡೌನ್ ಆದೇಶವನ್ನು ಒಂದು ಗಂಟೆಯ ನಂತರ ಸಚಿವರು ವಾಪಸ್ ಪಡೆದಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಸಭೆಯಲ್ಲಿ ಕೈಗೊಂಡ ಲಾಕ್ ಡೌನ್ ಆದೇಶವನ್ನು ರದ್ದು ಮಾಡಿದ್ದು, ಮುಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಆದೇಶ ಬರುವವರೆಗು ಈಗ ಇರುವ ಪರಿಸ್ಥಿತಿಯನ್ನು ಮುಂದುವರೆಸಲಾಗಿದೆ ಎಂದರು. ಬೆಂಗಳೂರಿನಲ್ಲಿ ಸಿಎಂ ಜೊತೆ ಚರ್ಚಿಸಿ ಕೇಂದ್ರದ ಆದೇಶ ನೋಡಿಕೊಂಡು ಮುಂದಿನ ತೀರ್ಮಾನ ಎಂದು ಹೇಳಿಕೆ ನೀಡಿದರು. ಇದರಿಂದ ಎಲ್ಲ ಜನಪ್ರತಿನಿಧಿಗಳ ಹೋರಾಟ ಹಾರಾಟಗಳೆಲ್ಲ ಮೂಲೆಗುಂಪಾಗಿದ್ದು, ಅವರ ಮಾತುಗಳಿಗೆ ಯಾವುದೇ ಬೆಲೆಯಿಲ್ಲದಂತೆ ಆಗಿದೆ.