ಶುಂಠಿಗೆ 1500/- ಬೆಂಬಲ ಬೆಲ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಹೆಚ್ ಯೋಗಾರಮೇಶ್.
ಇಂದು ಅರಕಲಗೂಡು ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಹೆಚ್ ಯೋಗಾರಮೇಶ್ ನೇತೃತ್ವದ ತಂಡ ಹಾಸನ ಜಿಲ್ಲಾಧಿಕಾರಿ ಆರ್ ಗೀರೀಶ್ ಅವರನ್ನು ಬೇಟಿ ಮಾಡಿ ಶುಂಠಿ ಮತ್ತು ಆಲೂಗಡ್ಡೆ ಬೆಲೆ ಕುಸಿದಿದ್ದು ಶುಂಠಿ 60Kg ಚೀಲಕ್ಕೆ ಕನಿಷ್ಟ 1500/- ಸೂಕ್ತ ಬೆಂಬಲ ಬೆಲೆಯನ್ನು ಸರ್ಕಾರ ತಕ್ಷಣವೇ ಘೋಷಣೆ ಮಾಡುವಂತೆ ಸರ್ಕಾರಕ್ಕೆ ವರದಿ ನೀಡಬೇಕು.
ಹಾಗೂ ರೈತರು ಬೆಳೆದ ಶುಂಠಿ ಮತ್ತು ಆಲೂಗಡ್ಡೆ ಬೆಳೆ ಹಾಳಾಗಿದ್ದು ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ, ಶುಂಠಿ ಮತ್ತು ಆಲೂಗಡ್ಡೆ ಬೆಳೆ ನಷ್ಟ ಆಗಿರುವ ಬಗ್ಗೆ ಅಧಿಕಾರಿಗಳಿಂದ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಬೆಳೆ ನಷ್ಟ ಪರಿಹಾರವನ್ನು ನೀಡುವಂತೆ ಕ್ರಮ ಕೈಗೊಳ್ಳಬೇಕು.
ಹಾಗೂ ಮುಂದಿನ ದಿನಗಳಲ್ಲಿ ದೃಢೀಕೃತ ಬಿತ್ತನೆ ಬೀಜದ ಶುಂಠಿಯನ್ನು ಸರ್ಕಾರದ ವತಿಯಿಂದಲೇ ಸಿದ್ದಪಡಿಸಿ ರೈತರಿಗೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಮಾಡಲಾಯಿತು.
ಇದಕ್ಕೆ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಸ್ಪಂದಿಸಿದ್ದು ಕೂಡಲೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ವರದಿ: ರಘು ಅರಕಲಗೂಡು
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ