ಹಾಸನ:MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ
ಅರಕಲಗೂಡು: ನಾಳೆ ಬಿಜೆಪಿ ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ. MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ
ಪತ್ರಿಕಾಗೋಷ್ಠಿಯಲ್ಲಿ ಹೆಚ್.ಯೋಗಾರಮೇಶ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಹಾಗೂ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರವಿಕುಮಾರ್, ಜಿಲ್ಲಾಧ್ಯಕ್ಷರಾದ ಸುರೇಶ್ ಉಲ್ಲಹಳ್ಳಿ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷವನ್ನು ಬಲಪಡಿಸಬೇಕು ಎಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದು ಹಾಸನ ಜಿಲ್ಲೆಯ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕಿದೆ ಈ ನಿಟ್ಟಿನಲ್ಲಿ ನಾಳೆ ಸಭೆ ನಡೆಯಲಿದೆ.
ಗ್ರಾಮಗಳ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರದ ನರೇಂದ್ರ ಮೋದಿ ಸರ್ಕಾರ ಗ್ರಾಮ ಪಂಚಾಯತಿಯನ್ನು ಸದೃಢ ಮಾಡಬೇಕು ಎಂದು ಗ್ರಾಮ ಪಂಚಾಯಿತಿಗೆ ಅತಿ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ಭಾರತೀಯ ಜನತಾ ಪಾರ್ಟಿ ಬೆಂಬಲಿಸಬೇಕಿದೆ. ಈ ದೃಷ್ಟಿಯಿಂದ ಗ್ರಾಮ ಪಂಚಾಯತಿ ಸದಸ್ಯರಲ್ಲಿ ಮನವಿ ಮಾಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಅರಕಲಗೂಡು ತಾಲ್ಲೂಕಿನಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಹೆಚ್ಚಿನ ಮತ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಈಗ ನಡೆಯುತ್ತಿರುವ 25 ವಿಧಾನ ಪರಿಷತ್ ಚುನಾವಣೆಯಲ್ಲಿ ಅತಿ ಹೆಚ್ವಿನ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಎಲ್ಲಿ ಬಿಜೆಪಿ ಇಲ್ಲ ಎನ್ನುತ್ತದ್ದರೋ ಅಲ್ಲೇ ಬಿಜೆಪಿ ಗೆಲ್ಲುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರದ ಗೆಲ್ಲುವ ವಿಶ್ವಾಸವಿದೆ.
ನಾಳೆ ಬಿಜೆಪಿ ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ ಇದೆ MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಲಾಗುವುದು.
MLC ಚುನಾವಣೆ ಪ್ರಯುಕ್ತ ನಾಳೆ ದಿನಾಂಕ: 06/12/2021 ರಂದು ಸಮಯ ಬೆಳಗ್ಗೆ 10:30ಕ್ಕೆ ಸ್ಥಳ ಕನ್ನಿಕಾ ಮಹಲ್ ಕಲ್ಯಾಣ ಮಂಟಪ (ಬಸ್ ಸ್ಟಾಂಡ್ ಎದುರು) ಅರಕಲಗೂಡು. ಇಲ್ಲಿ ಜನಪ್ರತಿನಿಧಿಗಳ ಮತ್ತು ಕಾರ್ಯಕರ್ತರ ಸಭೆ ನಡೆಯಲಿದೆ.
ಈ ಸಭೆಗೆ ಬಿಜೆಪಿ ಹಾಸನ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಹುಲ್ಲಹಳ್ಳಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಗೋಪಾಲಯ್ಯ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, ಹಾಸನ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿ ಶ್ರೀ ವಿಶ್ವನಾಥ್, ಹಾಸನ ಶಾಸಕ ಪ್ರೀತಮ್ ಜೆ ಗೌಡ, ಆಗಮಿಸಿ ಅರಕಲಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರುಗಳಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ವಿಶ್ವನಾಥ್ ಅವರಿಗೆ ಮತ ಹಾಕುವಂತೆ ಮತ ಯಾಚನೆ ಮಾಡಲಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿದಿಗಳು, ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಭೆಯನ್ನು ಯಶಸ್ವಿಯಾಗಿಸಬೇಕೆಂದು ವಿನಂತಿಸಿದರು
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಜಿಲ್ಲಾಧ್ಯಕ್ಷರಾದ ಹೆಚ್.ಯೋಗಾರಮೇಶ್, ಮಂಡಲದ ಸಂಚಾಲಕರಾದ ವಿಶ್ವನಾಥ್ ಹೆಚ್ ಪಿ, ಕೇಶವೇಗೌಡು, ಖಂಡೇಶ್ವರ್, ಸ್ವಾಮೀಗೌಡ್ರು, ಲೋಕೇಶ್ ಮತ್ತು ಗುರು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ