ಪೋಸ್ಟ್‌ಗಳು

ಜುಲೈ, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅರಕಲಗೂಡು ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ರಸ್ತೆಗೆ‌ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮದ ಮಹಿಳೆಯರು.

ಇಮೇಜ್
ಅರಕಲಗೂಡು ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ರಸ್ತೆಗೆ‌ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮದ ಮಹಿಳೆಯರು. ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ವಡ್ಡರಹಳ್ಳಿ ಇಂದ ಭೈರಾಪುರ, ನೇರಲಹಳ್ಳಿ ಮತ್ತು ಇತರೆ ಗ್ರಾಮಗಳು ಹಾಗೂ ವಡ್ಡರಹಳ್ಳಿ ಗ್ರಾಮದವರ ತೋಟ ಮತ್ತು ಹೊಲ ಗದ್ದೆಗಳಿಗೆ  ಸಂಪರ್ಕ ಕಲ್ಪಿಸುವ ಗೊರೂರು ಬಲದಂಡೆ ನಾಲೆ ಏರಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ತಡೆಗೋಡೆಯೂ ಇಲ್ಲದೇ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಹಾಗೂ ಬಲದಂಡೆ ನಾಲೆಯಲ್ಲಿ ಉತ್ತಮವಾಗಿದ್ದ ಸೋಪಾನ ಕಟ್ಟೆ ಕಲ್ಲುಗಳನ್ನು ಕಿತ್ತು ಕಳಪೆ ರೀತಿಯಲ್ಲಿ ಅವೈಜ್ಞಾನಿಕವಾಗಿ ಸೋಪಾನ ಕಟ್ಟೆ ನಿರ್ಮಾಣ ಮಾಡಿದ್ದಾರೆ. ಗ್ರಾಮಸ್ಥರು ಬಟ್ಟೆ ಒಗೆಯಲು ತುಂಬಾ ತೋದರೆ ಆಗುತ್ತಿದೆ. ಅಲ್ಲದೇ ರಸ್ತೆಯಲ್ಲಿ ಓಡಾಡಲು ತೊಂದರೆ ಆಗುತ್ತಿದೆ ಎಂದು ವಡ್ಡರಹಳ್ಳಿ ಗ್ರಾಮಸ್ಥರು ರಸ್ತೆಯಲ್ಲಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.  ಹಲವು ಬಾರಿ ಶಾಸಕರಿಗೆ ಮನವಿ ಮಾಡಿದರೂ ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಲಕ್ಷಾಂತರ ಹಣ ಖರ್ಚು ಮಾಡಿ ನಾಲೆ ಅಭಿವೃದ್ಧಿ ಮಾಡಲಾಗಿದೆ. ಕಳಪೆ ಕಾಮಗಾರಿ ಮಾಡುವ ಮೂಲಕ  ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗಿದೆ. ಕೂಡಲೇ ಶಾಸಕ ಎ.ಟಿ.ರಾಮಸ್ವಾಮಿ ಅವರು ಗಮನ ಹರಿಸಿ ಸಮಸ್ಯೆ ಬಗೆಹಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಗ್ರಾಮಸ್ಥರೊಂದಿಗೆ ಜೊತೆಗೂಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು...