ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.
ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ ಬೆನ್ನಲ್ಲೆ ಬಿಜೆಪಿ ಅರಕಲಗೂಡು ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹೆಚ್.ಯೋಗಾರಮೇಶ್ ಆಪ್ತರ ತಂಡ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಬೇಟಿ ಮಾಡಿ ಮಾತನಾಡಿದ್ದು ಹೆಚ್.ಯೋಗಾರಮೇಶ್ ಅವರು ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಜಿಲ್ಲೆಯಾಧ್ಯಂತ ಸಂಘಟನೆ ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಆದ್ದರಿಂದ ಪಕ್ಷಕ್ಕೆ ಯಾರೇ ಬಂದರೂ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹೆಚ್.ಯೋಗಾರಮೇಶ್ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಪೂರಕವಾಗಿ ಸ್ಪಂದಿಸಿದ್ದು ಯೋಗಾರಮೇಶ್ ಅವರಿಗೆ ಅನ್ಯಾಯ ಆಗಲ್ಲ. ಪಕ್ಷ ಎಲ್ಲವನ್ನು ಗಮನಿಸುತ್ತಿದೆ. ಯೋಗಾರಮೇಶ್ ಅವರ ಶ್ರಮ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.