ರಾಮದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಪೋಷಣಾ ಮಾಸಾಚರಣೆ.
ರಾಮದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಪೋಷಣಾ ಮಾಸಾಚರಣೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರದ ಉದ್ಘಾಟನೆಯ ನ್ನು ರಾಮದುರ್ಗ ಶಾಸಕರಾದ ಮಹದೇವಪ್ಪ ಯಾದವಾಡ ಮತ್ತು ತಾಲೂಕು ಆಡಳಿತದ ಮುಖ್ಯ ಅಧಿಕಾರಿಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪೋಷಣಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಿದ್ದಪಡಿಸಿದ ಪೌಷ್ಟಿಕ ಆಹಾರವನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ವೀಕ್ಷಣೆ ಮಾಡಿದರು.ಮತ್ತು ರಾಮದುರ್ಗ ತಾಲೂಕ ಮಕ್ಕಳ ಮತ್ತು ಮಹಿಳಾ ಶಿಶು ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮತ್ತು ಮಕ್ಕಳಿಗೆ ಅನ್ನಪ್ರಾಶನ,ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಬಾಂಡ್ ವಿತರಣೆ, ಮಕ್ಕಳ ಜನ್ಮದಿನವನ್ನು ಆಚರಿಸುವ ಮೂಲಕ ವಿಶೇಷವಾಗಿ ಪೋಷಣಾ ಮಾಸಾಚರಣೆ ಆಚರಣೆ ಮಾಡಿದರು, ಈ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರಾದ ಎಸ್.ಎಮ್.ಬೆನ್ನೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬೆಳಗಾವಿಯ ಉಪ ನಿರ್ದೇಶಕರಾದ ಬಸವರಾಜ ವರವಟ್ಟಿ,ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ...