ಹಾಸನ:MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ
ಅರಕಲಗೂಡು: ನಾಳೆ ಬಿಜೆಪಿ ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ. MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರಿಕಾಗೋಷ್ಠಿಯಲ್ಲಿ ಹೆಚ್.ಯೋಗಾರಮೇಶ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಹಾಗೂ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರವಿಕುಮಾರ್, ಜಿಲ್ಲಾಧ್ಯಕ್ಷರಾದ ಸುರೇಶ್ ಉಲ್ಲಹಳ್ಳಿ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷವನ್ನು ಬಲಪಡಿಸಬೇಕು ಎಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದು ಹಾಸನ ಜಿಲ್ಲೆಯ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕಿದೆ ಈ ನಿಟ್ಟಿನಲ್ಲಿ ನಾಳೆ ಸಭೆ ನಡೆಯಲಿದೆ. ಗ್ರಾಮಗಳ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರದ ನರೇಂದ್ರ ಮೋದಿ ಸರ್ಕಾರ ಗ್ರಾಮ ಪಂಚಾಯತಿಯನ್ನು ಸದೃಢ ಮಾಡಬೇಕು ಎಂದು ಗ್ರಾಮ ಪಂಚಾಯಿತಿಗೆ ಅತಿ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ಭಾರತೀಯ ಜನತಾ ಪಾರ್ಟಿ ಬೆಂಬಲಿಸಬೇಕಿದೆ. ಈ ದೃಷ್ಟಿಯಿಂದ ಗ್ರಾಮ ಪಂಚಾಯತಿ ಸದಸ್ಯರಲ್ಲಿ ಮನವಿ ಮಾಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಅರಕಲಗೂಡು ತಾಲ್ಲೂಕಿನಿ...